Monday, 12th May 2025

ಗುಂಪು ಘರ್ಷಣೆ: ಇಬ್ಬರು ಸಾವು

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು ಇಬ್ಬರ ಸಾವನ್ನಪ್ಪಿದ ಘಟನೆ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಯಂಕಪ್ಪ ಶ್ಯಾಮಪ್ಪ ತಳವಾರ (60), ಭಾಷಾ ಸಾಬ್ (22) ಎಂದು ಗುರುತಿಸಲಾಗಿದೆ. ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ ಧರ್ಮಣ್ಣ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.