ತುಮಕೂರು: ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್ನಲ್ಲಿ ನಿರ್ಮಾಣಗೊಂಡಿರುವ ಹೆಚ್ಎಎಲ್ ಹೆಲಿಕಾಪ್ಟರ್ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸದರಿ ಹೆಚ್ಎಎಲ್ ಹೆಲಿಕಾಪ್ಟರ್ ಘಟಕವನ್ನು ನರೇಂದ್ರ ಮೋದಿ ಅವರಿಂದ 2016ರಲ್ಲಿ ಶಂಕುಸ್ಥಾಪನೆಗೊಂಡು ಈಗ ಪ್ರಧಾನಿಯಿಂದಲೇ ಪ್ರಾರಂಭಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಸದರಿ ಎಚ್.ಎ.ಎಲ್. ಘಟಕ ವಿಸ್ತರಿಸಲು ಎಚ್ಎಎಲ್ನ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಇದನ್ನು ಕಾರೇಹಳ್ಳಿಯ ಹತ್ತಿರ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ.
ಈ ಸ್ಥಳವು ಸೂಕ್ತವಾಗಿರುವುದಿಲ್ಲವಾದ್ದರಿಂದ ಬಿದರೇಹಳ್ಳ ಕಾವಲ್ ಹತ್ತಿರದ ಅರಣ್ಯ ಇಲಾಖೆಗೆ ಸೇರಿದ ಜಾಗವು ಸೂಕ್ತ ವಾಗಿರುವುದರಿಂದ ಅಲ್ಲಿ ಏರ್ ಪೋರ್ಸ್ಸಿಯನ್ನು ಪ್ರಾರಂಭಿಸಲು ಅರಣ್ಯ ಇಲಾಖೆಯಿಂದ 1300 ಎಕರೆ ಜಾಗವನ್ನು ಪಡೆದು ಅರಣ್ಯ ಇಲಾಖೆಗೆ ಪ್ರತಿಯಾಗಿ ಬೇರೆ ಪ್ರದೇಶವನ್ನು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಇದರಿಂದ ಇಲ್ಲಿ ಸುಮಾರು ಹೆಚ್ಚಿನ ಜನರಿಗೆ ಉದ್ಯೋಗ ದೊರೆಯಲು ಅವಕಾಶವಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿ ಯಲ್ಲಿ ಕುಂದರನಹಳ್ಳಿ ರಮೇಶ್ ಇತರರಿದ್ದರು.