Saturday, 10th May 2025

ಶಿಗ್ಗಾಂವಿ-ಸವಣೂರು: ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಇಂದು

ಹಾವೇರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಸಿಎಂ ಪರ ಪ್ರಚಾರ ಮಾಡಲು ಶಿಗ್ಗಾಂವಿಗೆ ನಟ ಸುದೀಪ್ ಆಗಮಿಸಿದ್ದಾರೆ.

ಹೆಲಿಕಾಪ್ಟರ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆಗೆ ಶಿಗ್ಗಾಂವಿಗೆ ಆಗಮಿಸಿದ ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹಾಕಿ ಭರ್ಜರಿ ಸ್ವಾಗತ ಕೋರಿದ್ದಾರೆ. ಬಳಿಕ ಶಿಗ್ಗಾಂವಿ ನಗರದಲ್ಲಿ ಸಿಎಂ ಬೊಮ್ಮಾಯಿ ಅವರ ಬೃಹತ್ ರೋಡ್ ಶೋ ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್ ಶೋ ನಡೆಯುತ್ತಿದ್ದು, ರೋಡ್ ಶೋ ನಲ್ಲಿ ನಟ ಕಿಚ್ಚ ಸುದೀಪ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಾಥ್ ನೀಡಿದ್ದಾರೆ. ರೋಡ್ ಶೋ ನಲ್ಲಿ ಕಿಚ್ಚ ಸುದೀಪ್ ನೋಡಲು ಸಾವಿರಾರು ಜನರು ಗಲ್ಲಿಗಲ್ಲಿಯೂ ನಿಂತು ಜೈಕಾರ ಕೂಗುತ್ತಿದ್ದಾರೆ.

ರೋಡ್ ಶೋ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ತಹಶೀಲ್ದಾರ್ ಕಚೇರಿಗೆ ತೆರಳಿ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.