Saturday, 10th May 2025

ಕುಟುಂಬ ಸಮೇತ ಮತ ಚಲಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಕುಂಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಜೊತೆ ಪತ್ನಿ ಹಾಗು ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರೂ ಆಗಿರುವ ಅನಿತಾ ಕುಮಾರಸ್ವಾಮಿ, ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಗ ನಿಖಿಲ್​ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್​ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು.

ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ತಮ್ಮ ಕುಟುಂಬ ಸಮೇತ ಹಾಸನ ಜಿಲ್ಲೆಯ ಹೊಳೆನರಸೀಪುರದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.