Saturday, 17th May 2025

IAS Officers Transfer: ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ; ಒಬ್ಬರಿಗೆ ಹೆಚ್ಚುವರಿ ಹೊಣೆಗಾರಿಕೆ

KAS Officers Transfer

ಬೆಂಗಳೂರು: ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಹಾಗೂ ಒಬ್ಬ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರ್ಕಾರ ಆದೇಶ (IAS Officers Transfer) ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಆಯುಕ್ತ ಕೆ.ಶ್ರೀನಿವಾಸ್ ಅವರಿಗೆ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಇನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರನ್ನು ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಜಿ.ಜಗದೀಶ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ | Actor Darshan: ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ