Saturday, 10th May 2025

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಗದಗ: ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜಿಲ್ಲಾಡಳಿತದಲ್ಲಿ ಆಚರಿಸಲಾಯಿತು.
ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ನಾಡಪ್ರಭು ಕೆಂಪೇಗೌಡರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ  ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ ಅಧ್ಯಕ್ಷ ಕಾಂತಿ ಲಾಲ ಬನ್ಸಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದು ಪಲ್ಲೇದ,  ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಅಪರ ಜಿಲ್ಲಾಧಿಕಾರಿ ಅನ್ನ ಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.