Sunday, 11th May 2025

ಇಂದಿನಿಂದ ‘ಪಂಚರತ್ನ’ ರಥಯಾತ್ರೆ ಕೋಲಾರದಿಂದ ಆರಂಭ

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ ‘ಪಂಚರತ್ನ’ ರಥಯಾತ್ರೆಯನ್ನು ಕೋಲಾರ ದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಯಾತ್ರೆಗೆ ಚಾಲನೆ ನೀಡ ಲಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತಿದ್ದು, ರಾಜ ಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈಗಿನಿಂದಲೇ ಚುನಾವಣಾ ಪ್ರಚಾರ ಆರಂಭಿಸುವ ಸಲುವಾಗಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇಂದು ಮಧ್ಯಾಹ್ನ ಮುಳಬಾಗಿಲು ನಗರದ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ    ಹಮ್ಮಿಕೊಳ್ಳ ಲಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸೇರಿ ದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.