Monday, 12th May 2025

75 ವರ್ಷ ದಾಟಿದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೇಳಿಲ್ಲ: ಕೆ.ಎಸ್.ಈಶ್ವರಪ್ಪ

ಮಂಗಳೂರು: ತಮ್ಮ ವಯಸ್ಸಿನ ಕಾರಣದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗುವುದಿಲ್ಲ ಎಂಬ ಊಹಾಪೋಹಗಳ ನಡುವೆಯೇ ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು 75 ವರ್ಷ ಮೇಲ್ಪಟ್ಟವರು ಸ್ಪರ್ಧಿಸಬೇಕು ಎಂದು ತಮ್ಮ ಪಕ್ಷ ಯಾವತ್ತೂ ಹೇಳಿಲ್ಲ ಎಂದು ಹೇಳಿದ್ದಾರೆ.
ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ನೀವು ಟಿಕೆಟ್ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಮತ್ತು ಬಿಜೆಪಿಯು ಕೆಲವು ಹಾಲಿ ಶಾಸಕರನ್ನು ಕೈಬಿಡಲು ಮತ್ತು 75 ವರ್ಷಕ್ಕಿಂತ ಮೇಲ್ಪಟ್ಟವರನ್ನು ಕಣಕ್ಕೆ ಇಳಿಸಲು ಯೋಚಿಸುತ್ತಿದೆಯೇ ಎಂದು ಕೇಳಿದಾಗ, 74 ವರ್ಷದ ಈಶ್ವರಪ್ಪ, “ಬಿಜೆಪಿ ಮುಂದಿನ ಸರ್ಕಾರ ವನ್ನು ರಚಿಸಲಿದೆ. ನಾನು ಎಂಎಲ್‌ಎ ಆಗಿರಲಿ, ಇಲ್ಲದಿರಲಿ 150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು. 75 ವರ್ಷ ದಾಟಿದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಎಂದಿಗೂ ಹೇಳಿಲ್ಲ.

ಹೊರಟ್ಟಿ ಅವರಿಗೆ 77 ವರ್ಷ, ಅವರನ್ನು ಪಕ್ಷಕ್ಕೆ ಸ್ವಾಗತಿಸಿ ವಿಧಾನ ಪರಿಷತ್ತಿನ ಅಧ್ಯಕ್ಷರನ್ನಾಗಿ ಮಾಡಲಾ ಯಿತು. ನಮ್ಮ ಪಕ್ಷವು 75 ವರ್ಷ ಮೇಲ್ಪಟ್ಟವ ರನ್ನು ಕಣಕ್ಕಿಳಿಸುವುದಿಲ್ಲ ಎಂದು ಜನರು ಭಾವಿಸುತ್ತಾರೆ. ಆದರೆ ಬಿಜೆಪಿ ಸಂವಿಧಾನದಲ್ಲಿ ಅದು ಆಗುವುದಿಲ್ಲ ಎಂದರು.

ಹೈಕಮಾಂಡ್ ನನ್ನನ್ನು ಸ್ಪರ್ಧಿಸುವಂತೆ ಕೇಳಿದರೆ, ನಾನು ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಇಲ್ಲ ಎಂದರು.