Sunday, 11th May 2025

Mandya Violence: ನಾಗಮಂಗಲ ಗಲಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ

Mandya Violence

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಮೆರವಣಿಗೆಯ ಮೇಲೆ ಮತಾಂಧರು ಕಲ್ಲು ತೂರಾಟ (Mandya Violence) ಮಾಡಿ, ಅಂಗಡಿ-ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಅಷ್ಟೇ ಅಲ್ಲದೆ ಮಾರಕಾಸ್ತ್ರಗಳನ್ನು ಹೊರತಂದು ಅತ್ಯಂತ ಭೀಕರ ವಾತಾವರಣವನ್ನು ನಿರ್ಮಾಣ ಮಾಡಿದ್ದಾರೆ. ಈ ಗಲಭೆ ಸಂಪೂರ್ಣ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯಾದ್ಯಂತ ಇನ್ನೂ ಅನೇಕ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಬಾಕಿ ಇದ್ದು, ಎಲ್ಲ ಜಿಲ್ಲೆಗಳಲ್ಲಿ ಪೊಲೀರು ಕಟ್ಟೆಚ್ಚರ ವಹಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಹಿಂದು ಜನಜಾಗೃತಿ ಸಮಿತಿ ರಾಜ್ಯ ಸಮನ್ವಯಕರಾದ ಗುರುಪ್ರಸಾದ ಗೌಡ ಅವರು, ಗಲಭೆ ಸೃಷ್ಠಿಸಲೆಂದೇ ಈ ಕೃತ್ಯ ಎಸಗಲಾಗಿದೆ ಎಂಬುದು ತಿಳಿಯುತ್ತದೆ. ಈ ಘಟನೆಯನ್ನು ಹಿಂದು ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರ ಸಮ್ಮುಖದಲ್ಲೂ ಇಂತಹ ದೊಡ್ಡ ಮಟ್ಟದ ಹಲ್ಲೆ ನಡೆದಿರುವುದು ನಾಚಿಕೆಗೀಡು ಮಾಡಿದೆ. ಪೊಲೀಸರು ಅತಿ ಶೀಘ್ರದಲ್ಲಿ ವಶಕ್ಕೆ ಪಡೆದವರಲ್ಲಿ ಕೃತ್ಯಕ್ಕೆ ಕಾರಣಕರ್ತರಾದವರ ಮೇಲೆ ಕೂಡಲೇ ಕ್ರಮಕೈಗೊಳ್ಳಬೇಕು ಮತ್ತು ರಾಜ್ಯಾದ್ಯಂತ ಇನ್ನೂ ಅನೇಕ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಬಾಕಿ ಇದ್ದು ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ಸಮಿತಿಯು ಆಗ್ರಹಿಸುತ್ತದೆ.

ಈ ಸುದ್ದಿಯನ್ನೂ ಓದಿ | Mandya violence: ದುಷ್ಕರ್ಮಿಗಳು ಯಾವುದೇ ಧರ್ಮದವರಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ: ಸಿಎಂ

ಘಟನೆ ಬಗ್ಗೆ ಗೃಹ ಸಚಿವ ಡಾ. ಪರಮೇಶ್ವರ ಇವರು ಈ ಘಟನೆ ಆಕಸ್ಮಿಕವಾಗಿದ್ದು, ಯಾವುದೇ ದೊಡ್ಡ ಮಟ್ಟದ ಗಾಯ, ಜೀವಹಾನಿಯಾಗಿಲ್ಲ, ಇದನ್ನು ಇಲ್ಲಿಗೆ ನಿಲ್ಲಿಸಿಬಿಡೋಣ ಎಂದು ಪ್ರತಿಕ್ರಿಯಿಸಿದ್ದಾರೆ. ಗೃಹ ಸಚಿವರ ಈ ಹೇಳಿಕೆ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದೆ. ಇಂಥ ಹೇಳಿಕೆಗಳಿಂದಲೇ ಮತಾಂಧರಿಗೆ ಕುಮ್ಮಕ್ಕು ಸಿಗುತ್ತದೆ. ಸಮಿತಿ ಗೃಹ ಸಚಿವರ ಹೇಳಿಕೆಯನ್ನು ತೀವ್ರ ಶಬ್ದಗಳಲ್ಲಿ ಖಂಡಿಸುತ್ತದೆ. ಜೊತೆಗೆ ಮತಾಂಧರಿಂದ ಕಲ್ಲು ತೂರಾಟವಾಗಿರುವಾಗಲೂ ಗಣೇಶ ಮಂಡಳಿಯ ಸದಸ್ಯರನ್ನು ಬಂಧಿಸಿರುವುದು ಪುನಃ ಕಾಂಗ್ರೆಸ್‌ನ ಓಲೈಕೆ ನೀತಿಯನ್ನು ಎತ್ತಿ ತೋರಿಸುತ್ತದೆ. ಗೃಹ ಸಚಿವರು ಶಿವಮೊಗ್ಗದ ಈದ್ ಮಿಲಾದ್ ವೇಳೆ ಗಲಭೆಯಾದಾಗಲೂ ಇದೇ ರೀತಿ ಆಕಸ್ಮಿಕ ಘಟನೆ ಎಂದಿದ್ದರು. ಈಗ ಪುನಃ ಇದೇ ರೀತಿ ಹೇಳಿಕೆ ನೀಡಿದ್ದು ಜನತೆಯ ಕೋಪಕ್ಕೆ ಗುರಿಯಾಗಿದ್ದಾರೆ.

Leave a Reply

Your email address will not be published. Required fields are marked *