Saturday, 10th May 2025

Maryade Prashne: ಸಕ್ಕತ್ ಸ್ಟುಡಿಯೊದ ಚೊಚ್ಚಲ ಕಾಣಿಕೆ ‘ಮರ್ಯಾದೆ ಪ್ರಶ್ನೆ’ ಶೀಘ್ರದಲ್ಲೇ ತೆರೆಗೆ

Maryade Prashne

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ ‘ಮರ್ಯಾದೆ ಪ್ರಶ್ನೆ’ (Maryade Prashne) ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ನೋಡುಗನ ಮುಂದೆ ತಂದಿಟ್ಟಿತ್ತು. ಸಾಕಷ್ಟು ಸಿನಿಮೋತ್ಸಾಹವಿರುವ ಆರ್‌ಜೆ ಪ್ರದೀಪ್ ಅವರು ತಮ್ಮದೇ ಸಕ್ಕತ್ ಸ್ಟುಡಿಯೊ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಸಕ್ಕತ್ ಸ್ಟುಡಿಯೊ, ಈ ಹಿಂದೆ ವೆಬ್‌ಸಿರೀಸ್‌ ಗಮನ ಸೆಳೆದಿದ್ದ ಈ ನಿರ್ಮಾಣ ಸಂಸ್ಥೆ ಈಗ ಸಿನಿರಂಗಕ್ಕೂ ಹೆಜ್ಜೆ ಇಟ್ಟಿದೆ.

ಸಕ್ಕತ್ ಸ್ಟುಡಿಯೋ ಸಖತ್ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಚಿತ್ರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆರ್‌ಸಿಬಿ ಕಪ್ ಗೆಲ್ಲಬೇಕು ಅಂತ ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ರ‍್ಯಾಪರ್‌ ಆಲ್ ಓಕೆ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಡಿಸಿತ್ತು. ಹೀಗೆ ಆರಂಭದಿಂದಲೂ ಬಗೆ ಬಗೆಯಲ್ಲಿ ಪ್ರಚಾರ ಮಾಡುತ್ತಿರುವ ಚಿತ್ರತಂಡ ಗೌರಿ ಗಣೇಶ ಹಬ್ಬದ ದಿನವಾದ ಇಂದು ಥ್ರಿಲ್ಲಿಂಗ್ ಅಪ್ ಡೇಟ್ ಕೊಟ್ಟಿದೆ.

ಮರ್ಯಾದೆ ಪ್ರಶ್ನೆ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ವಿಘ್ನ ವಿಪತ್ತುಗಳಿಲ್ಲದೆ ನಿಮ್ಮೆಲ್ಲರನ್ನು ತಲುಪುತ್ತೇವೆ ಅತಿ ಶೀಘ್ರದಲ್ಲೇ. ಹಬ್ಬ ಮಾಡೋಣ ರೆಡಿ ಇರಿ, ಇದು ಮರ್ಯಾದೆ ಪ್ರಶ್ನೆ ಎಂದು ಚಿತ್ರತಂಡ ಘೋಷಣೆ ಮಾಡಿದೆ. ಪ್ರತಿಭಾನ್ವಿತರ ದಂಡೇ ಚಿತ್ರದಲ್ಲಿದ್ದು, ಭಿನ್ನ ಪಾತ್ರಗಳಿಗೆ ಹಲವರು ಬಣ್ಣ ಹಚ್ಚಿದ್ದಾರೆ. ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌‌ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್‌ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ.
ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ ಪ್ರದೀಪ್.

ಮರ್ಯಾದೆ ಪ್ರಶ್ನೆ ಚಿತ್ರವನ್ನು ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮೆರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ.

ಇದನ್ನೂ ಓದಿ | Accident Case: ಇಬ್ಬರ ಜೀವ ತೆಗೆದ ಶ್ರೀಮಂತ ಮಹಿಳೆಯಿಂದ ಹಣ ಪಡೆದು ಸಂತ್ರಸ್ತ ಕುಟುಂಬದಿಂದ ಕ್ಷಮಾದಾನ!

ಗಣೇಶ ಹಬ್ಬ ಸಂಭ್ರಮದ ನಡುವೆ ಸ್ಯಾಂಡಲ್‌ವುಡ್‌ಗೆ ‘ಟಾಮಿ’ ಎಂಟ್ರಿ!

Sandalwood News

ಬೆಂಗಳೂರು: ದೇಶದ ಜನತೆಗೆ ಗೌರಿ-ಗಣೇಶ ಹಬ್ಬದ ಸಂಭ್ರಮ. ಸಿನಿಮಾ ಮಂದಿಗೆ ಹಬ್ಬಗಳು ಮತ್ತಷ್ಟು ವಿಶೇಷ. ಹಬ್ಬ ಸಂಭ್ರಮಿಸುವ ಜತೆಗೆ ಹೊಸ ಸಿನಿಮಾ ಅನೌನ್ಸ್ ಮಾಡುವುದು, ಸಿನಿಮಾದ (Sandalwood News) ಬಗ್ಗೆ ಅಪ್ಡೇಟ್ ನೀಡುವುದು, ವಿಚಾರಗಳನ್ನು ಅಭಿಮಾನಿಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಗೌರಿ ಗಣೇಶ ಹಬ್ಬಕ್ಕೂ ಕೂಡ ಸಾಕಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗಿದೆ. ಈ ನಡುವೆ ಹೊಸಬರ ಹೊಸ ಸಿನಿಮಾ ಗಮನ ಸೆಳೆಯುತ್ತಿದೆ. ಹೌದು, ಗಣೇಶ ಹಬ್ಬದ ಪ್ರಯುಕ್ತ ಹೊಸ ಸಿನಿಮಾ ತಂಡ ‘ಟಾಮಿ’ ಎನ್ನುವ ಚಿತ್ರವನ್ನು ಅನೌನ್ಸ್ ಮಾಡಿದ್ದಾರೆ. ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡುತ್ತಿರುವ ಸಿನಿಮಾ ಎನ್ನುವುದೇ ವಿಶೇಷ.

‘ಟಾಮಿ’ ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ. ಈ ಚಿತ್ರಕ್ಕೆ ಆಶು ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನದ ಜತೆಗೆ ನಾಯಕನಾಗಿಯೂ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಿರ್ದೇಶನದ ಕ್ಯಾಪ್ ತೊಡುವ ಜತೆಗೆ ಫಸ್ಟ್ ಟೈಮ್ ತೆರೆ ಮೇಲೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ನಿರ್ದೇಶಕ, ನಾಯಕ ಆಶು ಅವರಿಗೆ ಚೊಚ್ಚಲ ಸಿನಿಮಾ ಅಂದ ಮಾತ್ರಕ್ಕೆ ಚಿತ್ರರಂಗವೇನು ಹೊಸದೇನಲ್ಲ. ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ಮುಕುಂದ ಮುರಾರಿ’, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ ‘ಅಂಬಿ ನಿಂಗೆ ವಯಸ್ಸಾಯ್ತೊ’, ಕೋಟಿಗೊಬ್ಬ-3 ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು.

ಸದ್ಯ ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ನಾಯಕ ಆಶು, ಜತೆಯಲ್ಲಿ ನಾಯಿ ಹಾಗೂ ಆರ್‌ಎಕ್ಸ್ ಬೈಕ್ ನೋಡಬಹುದು. ಪೋಸ್ಟರ್ ನೋಡುತ್ತಿದ್ದರೆ ನಾಯಕ ನಾಯಿ ಪ್ರೇಮಿ ಜತೆಗೆ ಆರ್‌ಎಕ್ಸ್ ಬೈಕ್‌ನ ಲವರ್ ಕೂಡ ಆಗಿರುತ್ತಾನೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಈ ಸುದ್ದಿಯನ್ನೂ ಓದಿ | Steelcase: ಬೆಂಗಳೂರಿನಲ್ಲಿ ಹೊಸ ಡೀಲರ್ ಶೋರೂಮ್ ಉದ್ಘಾಟಿಸಿದ ಸ್ಟೀಲ್ ಕೇಸ್

ಟಾಮಿ ಸಿನಿಮಾದಲ್ಲಿ ಬಹುತೇಕ ಹೊಸಬರು‌. ಎಲಿಪಾಸ್ ಇಂಡಿಯಾ ಎಂಟರ್ಟೈನ್ಮೆಂಟ್ ಬ್ಯಾನರ್ ಅಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಸಚಿನ್ ಶ್ಯಾಮ್ ಸುಂದರ್ ಹಾಗೂ ಅನೇಕ ಸ್ನೇಹಿತರು ಸೇರಿ ಬಂಡವಾಳ ಹೂಡುತ್ತಿದ್ದಾರೆ. ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಪ್ರದ್ಯುತನ್ ‘ಟಾಮಿ’ ಸಿನಿಮಾಗೂ ಸಂಗೀತ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *