Monday, 12th May 2025

ಬಸವನಬಾಗೇವಾಡಿ ಪಟ್ಟಣದಲ್ಲಿ ಬಹಿರಂಗ ಸಭೆ

ಕೋಲಾರ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ ಜೋಡೊ ಕಾರ್ಯಕ್ರಮದ ಸ್ವತಂತ್ರ ನಡಿಗೆ ಪಾದಯಾತ್ರೆ ಶಾಸಕ ಶಿವಾನಂದ ಪಾಟೀಲ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು 28 ರಂದು ಮನಗೂಳಿ, ಉಕ್ಕಲಿ, ಮಸಬಿನಾಳ ಇಂಗಳೇಶ್ವರ ಮಾರ್ಗವಾಗಿ ಬಸವನಬಾಗೇವಾಡಿ ಪಟ್ಟಣದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕು ಎಂದು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಆರ್.ಬಿ ಪಕಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ, ಬಸವನಬಾಗೇವಾಡಿ ಮತಕ್ಷೇತ್ರದ ಉಸ್ತುವಾರಿ ಎನ್.ಎಂ ಪಾಟೀಲ್, ರಾಜಶೇಖರ್ ಮೆನಶಿನಕಾಯಿ ಇತರರು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.