Sunday, 11th May 2025

Misbehave: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ : ಶಿಕ್ಷಕ ಅಮಾನತು

ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ತಾಲೂಕಿನ ಸಿರಿವರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅರ್.‌ ರಾಮು ಅಮಾನತುಗೊಂಡ ಶಿಕ್ಷಕ.

ಶಿಕ್ಷಕ ರಾಮು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿರುವ ಬಗ್ಗೆ ಪೋಷಕರು, ಎಸ್.ಡಿ.ಎಂ.ಸಿ ಪದಾಧಿ ಕಾರಿಗಳು ಮತ್ತು ಊರಿನ ಗ್ರಾಮಸ್ಥರು ಶಾಲಾ ಮುಖ್ಯ ಶಿಕ್ಷಕರಿಗೆ ಲಿಖಿತವಾಗಿ ದೂರು ನೀಡಿದ್ದರು.

ಈ ಕುರಿತು ತನಿಖೆ ಕೈಗೊಂಡು ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಉಪ ನಿರ್ದೇಶಕ ಮನಮೋಹನ ಅವರು ಆರೋಪದ ಬಗ್ಗೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸದರಿ ಆರೋಪಿತ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: Crime News: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ