Saturday, 10th May 2025

ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ: ಶಿಕ್ಷಕನ ಮೇಲೆ ಹಲ್ಲೆ

ಶ್ರೀರಂಗಪಟ್ಟಣ: ಮಂಡ್ಯದಲ್ಲಿ ವಿದ್ಯಾರ್ಥಿನಿಯರು ಪಾಠ ಕಲಿಸುವ ಶಿಕ್ಷಕನ ಮೇಲೆ ಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯರ ಬಳಿ ಬಾಲ ಬಿಚ್ಚಿದ ಶಿಕ್ಷಕನಿಗೆ ಚಳಿ ಬಿಡಿಸಲು ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ವಿದ್ಯಾರ್ಥಿನಿಯರು ತಳಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿ ಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವರ್ತನೆ ತೋರಿದ್ದ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಯರು ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಸಂಬಂಧ ಕೆ.ಆರ್.ಎಸ್ ಠಾಣಾ ಪೊಲೀಸರು ಕಾಮುಕ ಶಿಕ್ಷಕನನ್ನ ವಶಕ್ಕೆ ಪಡೆದಿದ್ದಾರೆ.