Saturday, 10th May 2025

MLA Jyoti Ganesh: ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಶಾಸಕ ಜ್ಯೋತಿ ಗಣೇಶ್

ತುಮಕೂರು: ಮುಡಾ ಹಗರಣ(MUDA scam) ಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌(Prosecution) ಗೆ ಅನುಮತಿ ನೀಡಿರುವುದನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ (MLA G B Jyotiganesh) ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಉಚ್ಛ ನ್ಯಾಯಾಲಯ(Karnataka HighCourt) ದಿಂದ ರಾಜ್ಯಪಾಲರ ಪ್ರಾಸಿಕ್ಯೂಷನ್(Governor Prosecution) ಸಿಂಧುಗೊಳಿಸಿದ ತೀರ್ಪು ಹೊರ ಬಂದ ನಂತರ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಗಿದೆ ಎಂದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಒಂದು ವೇಳೆ ತನಿಖೆಯಲ್ಲಿ ಕ್ಲೀನ್‌ಚಿಟ್ ಬಂದರೆ ಮತ್ತೆ ಮುಖ್ಯಮಂತ್ರಿಯಾಗಲಿ. ಇದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬದುಕಿನುದ್ದಕ್ಕೂ ನೈತಿಕತೆಯ ಮಾತುಗಳನ್ನಾಡುತ್ತಾ ಬಂದಿದ್ದಾರೆ. ನೈತಿಕತೆಯ ವಿಚಾರದಲ್ಲಿ ಅವರು ಯಾವತ್ತೂ ಕೂಡ ಹಿಂದಿರುಗಿ ನೋಡಿಲ್ಲ ಎಂದು ಭಾವಿಸಿದ್ದೇವೆ. ಹಾಗಾಗಿ ಈ ಪ್ರಕರಣದ ಸಂಬಂಧ ನೈತಿಕತೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರ ರಾಜಕೀಯದಲ್ಲಿ ಭಂಡತನಕ್ಕೆ ನಾವು ಉತ್ತರ ಕೊಡಲು ಸಾಧ್ಯವಿಲ್ಲ. ಇದೆಲ್ಲಾ ರಾಜಕೀಯ ದಲ್ಲಿ ಸರ್ವೇ ಸಾಮಾನ್ಯದ ಮಾತು. ಇದೇನೆ ಇರಲಿ, ಹೈಕೋರ್ಟ್ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದು ಪ್ರಾಸಿ ಕ್ಯೂಷನ್ ತನಿಖೆಗೆ ಸಮ್ಮತಿಸಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: MLA Jyoti ganesh: ಸರಕಾರಿ ಶಾಲೆಗಳನ್ನು ಉಳಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಜ್ಯೋತಿ ಗಣೇಶ್