Sunday, 18th May 2025

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಂಸದ ಬಸವರಾಜು

ತುಮಕೂರು: ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಘೋಷಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ,  ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅವರು ಹೇಳಿದ್ದಾರೆ. ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿಲ್ಲ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೆ ಎಂದು ಬಸವರಾಜ್ ಹೇಳಿದ್ದಾರೆ.