ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರ ರೈತರ ಬೆಳೆ ನಷ್ಟ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಜೊತೆಗೆ ಅದನ್ನು ಗಂಭೀರವಾಗಿ ಪರಿಗಣಿಸಿ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಂತಹ ಮಹತ್ವದ ಯೋಜನೆಯನ್ನು ಜಾರಿ ಮಾಡಿ ಒಂದೂವರೆ ಕೋಟಿ ರೈತರಿಗೆ 1.5 ಲಕ್ಷ ಕೋಟಿ ರೂಪಾಯಿಗಳಷ್ಟು ಬೆಳೆ ವಿಮೆ ನೀಡಿದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಅವರುಷ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ ಚಾಕವೇಲು ಗ್ರಾಮದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ತಲುಪುವಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿ ಮಾಡಿದೆ. ಆಯುಷ್ಮಾ ಭಾರತ್ ಯೋಜನೆಯ ಮೂಲಕ ಬಡವರ ಆರೋಗ್ಯ ಸಮಸ್ಯೆಗಳು,ಚಿಕಿತ್ಸೆ,ಶಸ್ತ್ರಚಿಕಿತ್ಸೆಗಳಿಗಾಗಿ ಒಬ್ಬ ವ್ಯಕ್ತಿಗೆ ಪ್ರತಿ ವರ್ಷ 5 ಲಕ್ಷ ರೂಪಾಯಿಗಳವರೆಗೆ ವೆಚ್ಚ ಭರಿಸುತ್ತಿದೆ. ಇದರಿಂದ ಬಡವರು,ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ. ಅಲ್ಲದೇ ಅತಿ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸುವ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯಲಾಗಿದೆ.
ಸ್ವಚ್ಛ ಭಾರತ್ ಯೋಜನೆಯಡಿ ವೈಯಕ್ತಿಕ ಶೌಚಾಲಗಳನ್ನು ನಿರ್ಮಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡವರು,ಮಧ್ಯಮವರ್ಗದ ಜನರ ಆರೋಗ್ಯ ಮತ್ತು ಸ್ವಾಭಿಮಾನ ಕಾಪಾಡುತ್ತಿದೆ. ಹವಾಮಾನ ವೈಪರೀತ್ಯದಿಂದಾಗಿ ರೈತರಿಗೆ ಬೆಳೆ ನಷ್ಟದಿಂದಾಗುವ ಆರ್ಥಿಕ ಹೊರೆ ತಪ್ಪಿಸಲು ಫಸಲ್ ಭಿಮಾ ಯೋಜನೆ ಜಾರಿ ಮಾಡಿದ್ದು, ಈ ಯೋಜನೆಯ ಮೂಲಕ ದೇಶದ ಒಂದೂವರೆ ಕೋಟಿ ರೈತರಿಗೆ 1.5 ಲಕ್ಷ ಕೋಟಿ ರೂಪಾಯಿ ಗಳನ್ನು ಬೆಳೆ ವಿಮೆ ಪರಿಹಾರವಾಗಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅಧಿಕಾರಿಗಳು ಮತ್ತು ಗ್ರಾಮಗಳ ಮುಖಂಡರು ಮುಂದಾಗಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: #SudhakarD