Saturday, 10th May 2025

ಖಾಸಗಿ ಬಸ್-ಇನ್ನೋವಾ ಕಾರಿನ ಅಪಘಾತ: ಮೃತರ ಸಂಖ್ಯೆ 11 ಕ್ಕೆ ಏರಿಕೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಶಶಿಕುಮಾರ್ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದರು. ಮೇ.27ರಂದು ಬಳ್ಳಾರಿಯ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಚಾಮುಂಡೇಶ್ವರಿ ತಾಯಿಯ ದರ್ಶನದ ಬಳಿಕ ಚಾಮರಾಜನಗರಕ್ಕೆ ತೆರಳುತ್ತಿದ್ದರು. ಬಿಳಿಗಿರಿ ರಂಗನ ಬೆಟ್ಟದಿಂದ ಕಾರಿನಲ್ಲಿ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ವಾಪಾಸ್ಸಾಗುತ್ತಿದ್ದಾಗ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ಸಿಗೆ ಇನ್ನೋವ ಕಾರು ಡಿಕ್ಕಿಯಾಗಿದೆ.