ಚಿಕ್ಕಬಳ್ಳಾಪುರ : ಸರ್ಕಾರದ ಕಾರ್ಯದರ್ಶಿಗಳು, ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುಳ ಅವರು ಸೋಮವಾರ ನಗರದ ೨೨ನೇ ವಾರ್ಡ್ ನ ನಮ್ಮ ಕ್ಲಿನಿಕ್ ಗೆ ಭೇಟಿ ನೀಡಿ ಅಲ್ಲಿನ ಆರೋಗ್ಯ ಸೇವೆಗಳ ವಿವರವನ್ನು ಪರಿಶೀಲಿಸಿದರು. ಈ ವೇಳೆ ಕೇಂದ್ರಕ್ಕೆ ಆಗಮಿಸಿದ್ದ ರೋಗಿಗಳಿಂದ ಆರೋಗ್ಯ ಚಿಕಿತ್ಸೆಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಇದನ್ನೂ ಓದಿ: chikkaballapurnews