Saturday, 10th May 2025

ಚಾಕು ಇರಿತ ಪ್ರಕರಣ: ಮುತಾಲಿಕ್’ಗೆ ನಿರ್ಬಂಧ

ಗದಗ: ಜಿಲ್ಲೆಯ ಮಲ್ಲಸಂದ್ರ ಗ್ರಾಮದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಶುಕ್ರವಾರ ನಗರಕ್ಕೆ ಭೇಟಿ ನೀಡಲಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆ.14ರವರೆಗೆ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾ ಪ್ರವಾಸಕ್ಕೆ ನಿಷೇಧ ವಿಧಿಸಿ ಜಿಲ್ಲಾಧಿಕಾರಿ ವೈಶಾಲಿ ಆದೇಶ ಹೊರಡಿಸಿದ್ದಾರೆ. ಮಲ್ಲಸಂದ್ರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮೊಹರಂ ಆಚರಣೆ ವೇಳೆ ಮಲ್ಲಸಂದ್ರ ಗ್ರಾಮದಲ್ಲಿ ಇಬ್ಬರು ಯುವಕರಿಗೆ ಚೂರಿ ಇರಿಯಲಾಗಿತ್ತು. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.