Sunday, 11th May 2025

Nomination: ಮಂಜುನಾಥ್ ರಿಂದ ನಾಮಪತ್ರ ಸಲ್ಲಿಕೆ

ಚಿಕ್ಕನಾಯಕನಹಳ್ಳಿ : ಸಾಮಾಜಿಕ ಚಿಂತಕ ಕಂಟಲಗೆರೆ ಕೆ.ಎನ್.ಮಂಜುನಾಥ್ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕರ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸು ತ್ತಿದ್ದಾರೆ. ಆರೋಗ್ಯ ಇಲಾಖೆಯ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಪ್ರತಿನಿಧಿಯಾಗಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕಡೆಯ ದಿನವಾಗಿತ್ತು. ಅ.19 ರಂದು ನಾಮಪತ್ರ ಪರಿಶೀಲನೆ ಹಾಗು ಅರ್ಹ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಆ.21 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಅ.೨೮ ರಂದು ೪ ಗಂಟೆಯವರೆಗೆ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಮತದಾನ ನಂತರ ಮತ ಏಣಿಕೆ ಹಾಗು ಫಲಿತಾಂಶ ಪ್ರಕಟಿಸಲಾಗುವುದು. ನಿರ್ದೇಶಕರ ಸ್ಥಾನಕ್ಕೆ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.