Monday, 12th May 2025

ಕಾಫಿನಾಡಿನಲ್ಲಿ ಮಂಗನ‌ ಕಾಯಿಲೆಗೆ ಒಂದು ಬಲಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ‌ ಕಾಯಿಲೆಗೆ ಈ ವರ್ಷ ಮೊದಲ ಸಾವಾಗಿದೆ. ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ.
ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಮೂರು ದಿನಗಳ ಕಾಲ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಅವರು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ದಾಖಲಾಗಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ.
ಶೃಂಗೇರಿ ತಾಲೂಕಿನಲ್ಲಿ ಮಂಗನ ಕಾಯಿಲೆ ಪ್ರಕರಣ ಕಾಣಿಸಿಕೊಂಡಿರಲಿಲ್ಲ, ಇದೇ ಮೊದಲ ಪ್ರಕರಣವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಇದುವರೆಗೂ ಮೂರು ಪ್ರಕರಣಗಳು ಕಾಣಿಸಿಕೊಂಡಿದೆ. ಕೊಪ್ಪ ತಾಲೂಕಿನ ಜೋಗಿಸರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ 35 ವರ್ಷದ ಮಹಿಳೆಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆ ಮಣಿ ಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 65 ವರ್ಷದ ವ್ಯಕ್ತಿಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು ಇವರು ಗುಣಮುಖರಾಗಿದ್ದಾರೆ.

Leave a Reply

Your email address will not be published. Required fields are marked *