Saturday, 10th May 2025

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮೈಸೂರು ದಸರಾ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟದಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉತ್ಸವಕ್ಕೆ ಚಾಲನೆ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿದೆ.

ದಸರಾ ಉತ್ಸವ ಉದ್ಘಾಟನೆಗೆ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ದೇವಿ ದರ್ಶನ ಪಡೆದುಕೊಂಡು ಪೂಜೆ ಸಲ್ಲಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಚಿವರಾದ ಶೋಭಾ ಕರಂದ್ಲಾಜೆ, ಎಸ್ ಟಿ ಸೋಮಶೇಖರ್ ಹಾಜರಿದ್ದರು.