Thursday, 22nd May 2025

ಸೆ. 22 ರಂದು ಬಹುಮಾನ ವಿತರಣೆ ಕಾರ್ಯಕ್ರಮ

ತುಮಕೂರು: ಶ್ರೀ ಸಿದ್ದಿವಿನಾಯಕ ಸೇವಾ ಮಂಡಲಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸ್ವಾಮಿಯ 46ನೇ ವರ್ಷದ ಗಣೇಶೋ ತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸ್ಥಳದಲ್ಲೇ ಚಿತ್ರ ಬರೆದ ವಿಜೇತರಿಗೆ ಬಹುಮಾನ ವಿತರಣೆ ಮತ್ತು ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲಾ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಶಾಲೆಗಳಿಗೆ ನೆನಪಿನ ಕಾಣಿಕೆ ವಿತರಣಾ ಸಮಾರಂಭ ಇಲ್ಲಿನ ಸಿದ್ದಿವಿನಾಯಕ ಸಭಾಮಂಟಪದಲ್ಲಿ ಸೆ. 22 ರಂದು ಸಂಜೆ 5.30ಕ್ಕೆ ನಡೆಯಲಿದೆ.
ಅಧ್ಯಕ್ಷತೆಯನ್ನು ಮಂಡಲಿಯ ಅಧ್ಯಕ್ಷ ಜಿ.ಹೆಚ್. ಪರಮಶಿವಯ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ತುಮಕೂರು ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಸಿ.ವಿ. ಮಹಾಲಿಂಗಪ್ಪ, ತುಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ಪಿ. ಸುರೇಶ್ ಭಾಗವಹಿಸುವರು.
ಇದೇ ಸಂದರ್ಭದಲ್ಲಿ ಸ್ಥಳದಲ್ಲೇ ಚಿತ್ರ ಬರೆದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು.