Sunday, 11th May 2025

Road Accident: ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಡಿಕ್ಕಿ; ಬಸ್ಸಿಂದ ಕೆಳಗೆ ಬಿದ್ದ ಮಹಿಳೆಗೆ ಗಂಭೀರ ಗಾಯ

Road Accident

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 44 ರ ಪೆರೇಸಂದ್ರ ಮೇಲ್ಸೇತುವೆ ಮೇಲೆ ಬೆಂಗಳೂರಿನಿಂದ ಬಾಗೇಪಲ್ಲಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸಿಗೆ ಟಿಪ್ಪರ್ ಲಾರಿ ಅಪ್ಪಳಿಸಿದ ಪರಿಣಾಮ (Road Accident) ಮಹಿಳಾ ಪ್ರಯಾಣಿಕರೊಬ್ಬರು ಬಸ್ಸಿಂದ ಹಾರಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಈ ಸುದ್ದಿಯನ್ನೂ ಓದಿ | Road Accident: ರಾಯಚೂರಿನಲ್ಲಿ ಭೀಕರ ಅಪಘಾತ; ಲಾರಿ-ಕಾರು ಡಿಕ್ಕಿಯಾಗಿ ಮೂವರ ದುರ್ಮರಣ

ಘಟನೆಯ ಹಿನ್ನೆಲೆ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಲೀಲಾವತಿ ಎಂಬ ಮಹಿಳೆಯು ಇನ್ನೇನು ನಿಲ್ದಾಣದಲ್ಲಿ ಇಳಿಯಬೇಕು ಎನ್ನುವಷ್ಟರಲ್ಲಿ ಗುಡಿಬಂಡೆ ರಸ್ತೆಯ ಕಡೆಯಿಂದ ಬಂದ ಟಿಪ್ಪರ್ ಲಾರಿಯೊಂದು ಬಸ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಪರಿಣಾಮ ಬಸ್ ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಿ ನಿಂತಿದ್ದು, ಆಯತಪ್ಪಿದ ಪ್ರಯಾಣಿಕ ಮಹಿಳೆ ಬಸ್ಸಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿ, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲಾ ದೃಶ್ಯಗಳು ಮೇಲ್ಸೇತುವೆ ಮೇಲೆ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಕುರಿತು ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.