ತುಮಕೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ದರು.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಮಾತ ನಾಡಿ, ಕಳೆದ 30 ವರ್ಷಗಳಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸು ವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು ಸಹ ಸರಕಾರ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು.
ಅಹಿಂದ ಮುಖಂಡ ವಿರೂಪಾಕ್ಷ ಡ್ಯಾಗೇರಹಳ್ಳಿ ಮಾತನಾಡಿ, ಪರಿಶಿಷ್ಟ ಜಾತಿಯ ಹೆಸರಲ್ಲಿ ವೀರಶೈವ ಲಿಂಗಾಯತ ಸಮುದಾ ಯಗಳು ಬೇಡಜಂಗಮ, ಬುಡ್ಗ ಜಂಗಮ ಹೆಸರಿನಲ್ಲಿ ಪಡೆದಿರುವ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿ, ಸುಳ್ಳು ಪ್ರಮಾಣಪತ್ರ ನೀಡಿರುವ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ, ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಿವಶಂಕರ್ ಕುಣಿಗಲ್, ಕುಂದೂರು ಮುರುಳಿ, ನಾಗತಿಹಳ್ಳಿ ಕೃಷ್ಣಮೂರ್ತಿ, ಚೇಳೂರು ಶಿವನಂಜಪ್ಪ, ಮೀನ ಕುಂಟನಹಳ್ಳಿ ನರಸಿಂಹಪ್ಪ, ಡಾ.ಮುರುಳೀಧರ್, ನಿಟ್ಟೂರು ಗಂಗಾರಾಮ್, ಉಪ್ಪಾರಹಳ್ಳಿ ನಾಗರಾಜು, ಕೆಂಚಮಾರಯ್ಯ, ಬೆಲ್ಲದಮಡಗು ಶಿವಕುಮಾರ್, ಹಂದನಕೆರೆ ನಾಗರಾಜು ಸೇರಿದಂತೆ ಇತರರಿದ್ದರು.