Saturday, 10th May 2025

ಸೆಕ್ಷನ್ 144 ಜಾರಿ: ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಶಿವಮೊಗ್ಗ: ನಗರದಲ್ಲಿ‌ ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ರದ್ದುಗೊಳಿಸಲಾಗಿದೆ.

ನಗರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಲುವಾಗಿ ಅಮೀರ್ ಅಹ್ಮದ್ ವೃತ್ತದಲ್ಲಿ ಅಳವಡಿಸಲಾಗಿದ್ದ ವಿ ಡಿ ಸಾವರ್ಕರ್ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಕಿತ್ತು ಹಾಕಿದ್ದರು. ಈ ವೇಳೆ ಪೊಲೀಸರು, ಕಿಡಿಗೇಡಿಗಳ ನಡುವೆ ವಾಗ್ವಾದ ಉಂಟಾಗಿದ್ದ ರಿಂದಾಗಿ, ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದರು.

ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸಿ, ಹಾಕಿದ್ದ ಜಾಗದಲ್ಲಿಯೇ ಹಾಕುವಂತೆ ಒತ್ತಾಯಿಸಿ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಧರಣಿ ನಡೆಸಿದರು. ಹೀಗಾಗಿ ಪರಿಸ್ಥಿತಿ ಬಿಗುವಿನಿಂದ ಕೂಡಿದ ಕಾರಣ, ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.

ಈ ಹಿನ್ನಲೆಯಲ್ಲಿ ಕುವೆಂಪು ರಂಗಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.