Wednesday, 14th May 2025

ಕಮಲಕ್ಕೆ ವಿದಾಯ ಹೇಳುತ್ತಿರುವ ಸಂಘದ ಕಟ್ಟಾಳು ಸೊಗಡು

ತುಮಕೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿ ಬಂಡಾಯವಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.

ನಗರದ ಮಾಕಂ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬೆಂಬಲಿಗರ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಚಿವರು ಜನಸಂಘದ ಕಾಲ ದಿಂದಲೂ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದು ೨೦೧೮ರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮಾತಿಗೆ ಮನ್ನಣೆ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುತ್ತದೆ ಎಂಬ ಭರವಸೆ ಹುಸಿಯಾಗಿದೆ ಎಂದರು.

ಜೋಳಿಗೆ ಹಿಡಿದು ಮತದಾರರ ಬಳಿ ಹೋಗುತ್ತಿದೆ. ಆದರೆ ಟಿಕೆಟ್ ನೀಡದೆ ಮೋಸ ಮಾಡಲಾಗಿದೆ. ನಾನು ಮುಂದಿಟ್ಟ ಹೆಜ್ಜೆಯನ್ನು ಯಾವುದೇ ಕಾರಣಕ್ಕೂ ಹಿಂದಕ್ಕೆ ಇಡುವ ಪ್ರಮೇಯವೇ ಇಲ್ಲ. ಬೆಂಬಲಿಗರ, ಕಾರ್ಯಕರ್ತರ ಸಹಕಾರದಿಂದಾಗಿ ಹಾಗೂ ಕೇತ್ರದ ಮತದಾರರು ನಮ್ಮ ಪರವಾ ಗಿದ್ದಾರೆ ಎಂಬ ಭರವಸೆಯೊಂದಿಗೆ ಬಂಡಾಯವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.