Saturday, 10th May 2025

ವಿದ್ಯಾರ್ಥಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ

ಡುಪಿ: ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿ ಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ.

ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಮಾಹೆಯ ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಫೋನ್ ಬಳಸುತ್ತಿರುವುದನ್ನು ಪರೀಕ್ಷಾ ಮೇಲ್ವಿಚಾರಕರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮನ್ ರನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿ ಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *