Sunday, 11th May 2025

ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ

ಗುಬ್ಬಿ : ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ಮಂಗಳವಾರ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಗುಬ್ಬಿಗೆ   ಕೆ ಪಿ ಸಿ ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶಂಕರಾನಂದ್ ತಿಳಿಸಿದರು.

ಪಟ್ಟಣದ  ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಅವರು, ಕಾಂಗ್ರೆಸ್ ಪಕ್ಷವು ಜನಸಾಮಾನ್ಯರ ಬದುಕನ್ನು ಸುಧಾರಿಸುವ   ಯೋಜನೆಗಳನ್ನು ರೂಪಿಸಿದೆ. ರಾಜ್ಯಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದು ಸಂಪೂರ್ಣ ಬಹುಮತ ದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ. ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ  ಎಲ್ಲರೂ  ಕೈಜೋಡಿಸಿದ್ದೇವೆ. ನಾಳೆ ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ  ಮೆರವಣಿಗೆ ಮೂಲಕ ತಾಲೂಕ್ ಕಚೇರಿ ತಲುಪಲಾಗುವುದು  ತಾಲೂಕಿನ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ಚಿಕ್ಕ ರಂಗೇಗೌಡ ಮಾತನಾಡಿ ತಾಲೂಕಾಧ್ಯಂತ ವಾಸಣ್ಣ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು 30000 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ  ಆಗಮಿಸುವ ಸಾಧ್ಯತೆ ಇದೆ ಈ ಬಾರಿ ಗುಬ್ಬಿ ಕ್ಷೇತ್ರದಲ್ಲಿ ಅತಿ ಹೆಚ್ಚು ಮತ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷ ದಾಖಲೆ ನಿರ್ಮಿಸಲಿದೆ ಎಂದು  ತಿಳಿಸಿದರು.
 ಈ ಸಂದರ್ಭದಲ್ಲಿ ಮುಖಂಡರಾದ ಗುರು ರೇಣುಕಾರಾಧ್ಯ, ಮೊಹಮ್ಮದ್ ಸಾಧಿಕ್, ಭರತ್ ಗೌಡ, ಮಂಜಣ್ಣ, ಹೊಸಕೆರೆ ಬಾಬು, ಸತೀಶ್ ಮುಂತಾದವರಿದ್ದರು.