Monday, 12th May 2025

ಸರ್ವೋದಯ ಕಾಲೇಜಿನ ರುಚಿತ ರಾಜ್ಯಕ್ಕೆ ಮೂರನೇ ರ‍್ಯಾಂಕ್

ತುಮಕೂರು: ನಗರದ ಸರ್ವೋದಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಚಿತ ಎಂ., ವಿಜ್ಞಾನ ವಿಭಾಗದಲ್ಲಿ 594 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಸೀತರಾಮು, ಜಂಟಿ ಕಾರ್ಯದರ್ಶಿ ಕೆ.ಬಿ. ಸುಬ್ಬರಾವ್, ಪ್ರಾಚಾರ್ಯ ಬಿ.ಎಸ್. ಕಮಲಾಕ್ಷಿ ಅವರು ರ‍್ಯಾಂಕ್  ವಿಜೇತ ವಿದ್ಯಾರ್ಥಿನಿಗೆ ಸಿಹಿ ತಿನಿಸಿ ಅಭಿನಂದಿಸಿದರು.
ತುರುವೇಕೆರೆ ತಾಲ್ಲೂಕಿನ ಸಂಕಲಾಪುರ ಗ್ರಾಮದ ಮಂಜುನಾಥ್ ಮತ್ತು ವಿಜಯಲಕ್ಷ್ಮಿ ದಂಪತಿಗಳ ಪುತ್ರಿ ರುಚಿತ,  ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.