Wednesday, 14th May 2025

MLA M T Krishnappa: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಗೆಲುವು ಖಚಿತ

ಗುಬ್ಬಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ವಿಶ್ವಾಸ ವ್ಯಕ್ತಪಡಿಸಿದರು.

 ತಾಲೂಕಿನ ಸಿಎಸ್ ಪುರ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಗಂಗೆ ಪೂಜೆ ಮಾಡುವ ಮೂಲಕ ಬಾಗಿನ ಅರ್ಪಿಸಿ ಮಾತನಾಡಿ ಸಿಎಸ್ ಪುರ ಭಾಗದ ಎಲ್ಲಾ ಕೆರೆಗಳು ತುಂಬಿದ್ದು ರೈತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ದೇವರ ಕೃಪೆಯಿಂದ ಪ್ರತಿ ವರ್ಷ ಇದೇ ರೀತಿ ಕೆರೆಗಳು ತುಂಬಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದ ಅವರು, ಸಾಧಾರಣ ವ್ಯಕ್ತಿ ರೈತರ ಮಗನಾಗಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಹೆಸರು ಮಾಡಿರುವ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಂಸದ ಡಿಕೆ ಸುರೇಶ್ ಲಘುವಾಗಿ ಮಾತನಾಡುವುದು ಖಂಡನೀಯ. ಕಾಂಗ್ರೆಸಿನವರು ಸೋಲನ್ನು ಒಪ್ಪಿಕೊಂಡು ನಿಖಿಲ್ ಕುಮಾರಸ್ವಾಮಿ ಪಟ್ಟಾಭಿಷೇಕದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾವಿನಹಳ್ಳಿ ಗ್ರಾ ಪಂ ಅಧ್ಯಕ್ಷೆ ಲಕ್ಷ್ಮಿ ರವಿಕುಮಾರ್, ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ನರಸೇಗೌಡ, ಹೋಬಳಿ ಘಟಕದ ಅಧ್ಯಕ್ಷ ನವೀನ್ ಕುಮಾರ್, ಚನ್ನೇನಹಳ್ಳಿ ಮೂರ್ತಣ್ಣ, ವೀರಣ್ಣನ ಗುಡಿ ರಾಮಣ್ಣ,ನಂಜೇಗೌಡ, ಮುಂತಾದವರಿದ್ದರು.