Thursday, 15th May 2025

Tumkur News: ಪಕ್ಷ ಸಂಘಟನೆಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಗುಬ್ಬಿ: ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಮತ್ತು ಸಹಕಾರ ಸಂಘಗಳ ಚುನಾವಣೆ ಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಪಕ್ಷ ಸಂಘಟನೆ, ಕಾರ್ಯಕರ್ತರು, ಮುಖಂಡರ ಸಭೆಗಳನ್ನು ಮಾಡಲಾಗುತ್ತಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಹಾಗೂ ಮಾಜಿ ಶಾಸಕ ವೆಂಕಟರಮಣಪ್ಪ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮಾತನಾಡಿ ಕುಡಿಯುವ ನೀರು ಪ್ರತಿಯೊಬ್ಬರಿಗೂ ಬೇಕಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಈಗಾಗಲೇ ಸಮಿತಿಯನ್ನು ರಚಿಸಲಾಗಿದೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯಲಿದೆ ಎಂದ ಅವರು ತುಮಕೂರು ಜಿಲ್ಲಾ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ತಾಲೂಕು ಘಟಕದ ಅಧ್ಯಕ್ಷ ಕೆ ಆರ್ ವೆಂಕಟೇಶ್, ಪಟ್ಟಣ ಪಂಚಾಯಿತಿ  ಅಧ್ಯಕ್ಷೆ ಮಂಗಳಮ್ಮ, ತಾತಯ್ಯ, ರೇಣುಕಾರಾಧ್ಯ, ಶಂಕರಾನಂದ, ಸೌಭಾಗ್ಯಮ್ಮ, ಕೊಡಿಯಾಲ ಮಹಾದೇವ್ , ಕಡಬ ಶಂಕರ್, ಚೇಳೂರು ಶಿವನಂಜಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.