Monday, 12th May 2025

ಭೀಕರ ಅಗ್ನಿ ದುರಂತ: ಇಬ್ಬರು ಮಕ್ಕಳ ಸಾವು

ಕೊಪ್ಪಳ: ಜಿಲ್ಲೆಯ ಕೋಮಲಾಪುರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಜಯರಾಜ (8) ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ವಿನೋದರಾಜ (11) ನನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿನೋದರಾಜ ಸಹ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.