Saturday, 10th May 2025

Vemana jayanti: ವೇಮನ ಜಯಂತಿ ಮತ್ತು ಅಂಬಿಗರ ಚೌಡಯ್ಯ ಜಯಂತಿಗಳ ಪೂರ್ವಭಾವಿ ಸಭೆ

ಚಿಕ್ಕಬಳ್ಳಾಪುರ : ಜನವರಿ 20 ರಂದು “ವೇಮನ ಜಯಂತಿ”ಯನ್ನು ಮತ್ತು ಜನವರಿ 21 ರಂದು ಅಂಬಿಗರ ಚೌಡಯ್ಯ ಜಯಂತಿಯನ್ನು ಜಿಲ್ಲಾಡಳಿತ ಭವನದ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಆಚರಿಸಲಾಗು ವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.

ಗುರುವಾರ ಜಿಲ್ಲಾಡಳಿತ ಭವನದ  ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ “ವೇಮನ ಜಯಂತಿ” ಮತ್ತು  ಅಂಬಿಗರ ಚೌಡಯ್ಯ ಜಯಂತಿಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾ ಯದ ಮುಖಂಡರ ಸಲಹೆಗಳನ್ನು ಆಲಿಸಿದ ನಂತರ ಅವರು ಮಾತನಾಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ವೇಮನ ಜಯಂತಿ ಮತ್ತು ಅಂಬಿಗರ ಚೌಡಯ್ಯ  ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ಧತೆ ಮತ್ತು ಅಲಂಕಾರ, ಕುಡಿಯುವ ನೀರು, ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಕಲ ಸಿದ್ಧತೆಗಳನ್ನು ಸಮರ್ಪಕವಾಗಿ ಮಾಡುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ವೇಮನ ಸಮುದಾಯ ಸಂಘದ ಅಧ್ಯಕ್ಷ ಪಾಪಿರೆಡ್ಡಿ, ಕಾರ್ಯದರ್ಶಿ ರವೀಂದ್ರ ರೆಡ್ಡಿ, ಖಜಾಂಚಿ ರಾಮ ಚಂದ್ರರೆಡ್ಡಿ, ಗೌರವ ಅಧ್ಯಕ್ಷ ನಾಗರಾಜ ರೆಡ್ಡಿ, ಶಿವರಾಮ ರೆಡ್ಡಿ, ರಾಮ ಸುಬ್ಬಾರೆಡ್ಡಿ, ಅಂಬಿಗರ ಚೌಡಯ್ಯರ ಸಮುದಾಯ ಸಂಘದ ಜಿಲ್ಲಾಧ್ಯಕ್ಷ ಕೆ.ಜಯರಾಮ್, ಉಪಾಧ್ಯಕ್ಷ ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಆರ್.ಎ. ರವಿಕುಮಾರ್, ಸಮುದಾಯದ ಮುಖಂಡರಾದ ರಾಜಶೇಖರ್, ನರಸಿಂಹರಾಜು, ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *