Saturday, 17th May 2025

Vishwakarma: ಜನವರಿ 6ರಂದು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆಯನ್ನು ಜನವರಿ ೬ ರಂದು ಅಪರಾಹ್ನ ೧೧.೩೦ ಗಂಟೆಗೆ ಚಿಕ್ಕಬಳ್ಳಾಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ  ಆಯೋಜಿಸಲಾಗಿದೆ.

ಬೆಳಿಗ್ಗೆ ೯:೩೦ ಗಂಟೆಗೆ ಶ್ರೀ ಜಕಣಚಾರಿಯವರ ಪಲ್ಲಕ್ಕಿ ಹಾಗೂ ಜಾನಪದ ಕಲಾ ತಂಡಗಳೊAದಿಗೆ ಬಿ.ಬಿ. ರಸ್ತೆಯ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಮುಂಭಾಗದಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್  ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋ ಕಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿ ಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ,  ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ  ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್. ಮಂಜುಳ ರವರು ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಚಿಕ್ಕಬಳ್ಳಾಪುರ ದೇವಾಲಯ ಕಟ್ಟಡ ಕಾರ್ಮಿಕ ಶಿಲ್ಪ ಕಲಾ ಕ್ಷೇಮಾಭಿವೃದ್ಧಿ ಸಂಘದ  ಅಧ್ಯಕ್ಷರಾದ ಕೆ.ಬಿ ನಾಗರಾಜ ಚಾರ್ಯ ಅವರು ಭಾಗವಹಿಸಲಿದ್ದಾರೆ. ಸಮಾಜ ಸೇವಕರಾದ ಅನಿಲ್ ಕುಮಾರ್  ಅವರು ಉಪನ್ಯಾಸವನ್ನು ನೀಡಲಿದ್ದಾರೆ.

ದೇವಾಲಯ ಕಟ್ಟಡ ಕಾರ್ಮಿಕ ಶಿಲ್ಪಕಲಾ ಕ್ಷೇಮಾಭಿವೃದ್ಧಿ ಸಂಘ, ವಿಶ್ವಕರ್ಮ ಸಂಘ, ಜಿಲ್ಲಾ ವಿಶ್ವಕರ್ಮ ಮಹಾ ಸಭಾ, ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ, ವಿಶ್ವಕರ್ಮ ಉತ್ಸವ ಸಮಿತಿ, ಕಾಳಿಕಾಂಭ ಮಹಿಳಾ ಸಂಘ, ವಿಶ್ವಕರ್ಮ ಗಣಪತಿ ಗೆಳೆಯರ ಬಳಗ, ಶ್ರೀ ಕಾಳಿಕಾಂಭ ವಿಶ್ವಕರ್ಮ ಸಂಘ, ಕಣಜೇನಹಳ್ಳಿ ಮತ್ತು ಎಲ್ಲಾ ಸಮುದಾಯಗಳ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.