ಚಿಕ್ಕಬಳ್ಳಾಪುರ : ಇಂದು ಜಿಲ್ಲಾಡಳಿತ ಭವನದದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಬಳ್ಳಾ ಪುರ, ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ (ರಿ.), ಗುಡಿಬಂಡೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನೇರಳೆ ವೀರಭದ್ರಯ್ಯ ಭವಾನಿ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ, ಜಿಲ್ಲಾ ಪಂಚಾಯತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ರಾಷ್ಟ್ರೀಯ ಮಾನವ ಹಕ್ಕುಗಳು ಹಾಗೂ ಭ್ರಷ್ಠಾಚಾರ ವಿರೋಧಿ ಗಳ ಸಂಘ (ರಿ) ಜಿಲ್ಲಾ ಅಧ್ಯಕ್ಷ ಟಿ.ಆರ್ ಕೃಷ್ಣಪ್ಪ, ಜಿಲ್ಲಾ ಸರ್ಕಾರಿ ವಕೀಲರಾದ ಬಿ. ವಿನೋದ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಎಂ.ಜುAಜಣ್ಣ ರವರು ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ (ರಿ), ಗುಡಿಬಂಡೆ ಇದರ ಸಂಸ್ಥಾಪಕ ಅಧ್ಯಕ್ಷ ಹಾಗೂ , ವಕೀಲ ಜಿ.ವಿ ವಿಶ್ವನಾಥ್ ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಮತ್ತು ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿ ಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.