Saturday, 10th May 2025

ನದಿಯಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಶವ…!

ಕೃಷ್ಣಾ ನದಿ ಪಾಲದ ವ್ಯಕ್ತಿಯ ಗುರುತು ಪತ್ತೆ ಇಲ್ಲ…!

ಯಾದಗಿರಿ: ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವ ಸಾಗರ ಜಲಾಶಯ ಭರ್ತಿಯಾ ಗಿದ್ದು. ಸದ್ಯ ಅಣೆಕಟ್ಟಿನಿಂದ ಕೃಷ್ಣ ನದಿಗೆ ಅತಿ ಹೆಚ್ಚು ನೀರು ಹರಿ ಬಿಡಲಾಗುತ್ತಿದೆ. ಕೃಷ್ಣೆ ಯು ಮೈದುಂಬಿ ಹರಿಯುತ್ತಿದ್ದು ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲಿ ಬಂದಿರುವ ಘಟನೆ ನಡೆದಿದೆ.

ಹುಣಸಗಿ ತಾಲೂಕಿನ ಗೆದ್ದಲಮರಿ ಸಮೀಪದ ಕೃಷ್ಣಾ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು. ಗ್ರಾಮಸ್ಥರು ನದಿ ತೀರಕ್ಕೆ ತೆರಳಿದ ಸಂದರ್ಭದಲ್ಲಿ ವ್ಯಕ್ತಿಯ ಶವ ಕಂಡು ಬಂದಿದೆ. ತಕ್ಷಣವೇ ಸ್ಥಳೀಯರು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದು.

ಕೊಡೆಕಲ್ – ಹುಣಸಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕೊಡೆಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *