Wednesday, 14th May 2025

ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ನಿಧನ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಕಟೀಲು ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ತ್ರಿಜನ್ಮ ಮೋಕ್ಷ ಯಕ್ಷಗಾನದಲ್ಲಿ ಗುರುವಪ್ಪ ಬಾಯಾರು ಶಿಶುಪಾಲನ ಪಾತ್ರ ವನ್ನು ಮಾಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಪ್ಪ ಬಾಯಾರು ನಿಧನರಾಗಿದ್ದಾರೆ ಎನ್ನುವುದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ಗಮಕ ಗಂಧರ್ವ, ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿಯ ಎಚ್.ಆರ್.ಕೇಶವಮೂರ್ತಿ (89) ಅವರು ನಿಧನರಾಗಿದ್ದರು.