ಚಿಕ್ಕಬಳ್ಳಾಪುರ : ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಯುವ ಜನತೆಯ ಉಜ್ಜಲ ಭವಿಷ್ಯಕ್ಕಾಗಿ 2024ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ ೩ ಸಾವಿರ, ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂಗಳನ್ನು ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯಾಗಿ ನೀಡಲಾಗುತ್ತದೆ. ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, 2025ರ ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಥವಾ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ಸೇವಾ ಸಿಂಧುಜಿಎಸ್ ಡಾಟ್ ಕರ್ನಾಟಕಡಾಟ್‌ಗೌಡಾಟ್‌ಇನ್ ನಲ್ಲಿ ನೋಂದಾಯಿಸಿಕೊಳ್ಳುವುದು. ಅರ್ಹ ಅಭ್ಯರ್ಥಿಯು ಪ್ರತಿ ಮಾಹೆ 25 ರೊಳಗೆ ತಾನು ನಿರುದ್ಯೋಗಿ ಎಂದು ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಬೇಕು. ಜಿಲ್ಲೆಯ ಎಲ್ಲಾ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ೧೮೦೦-೫೯೯-೭೧೫೪ ಗೆ ಸಂಪರ್ಕಿಸಬಹುದೆAದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರು ಪೋಸ್ಟರ್ ಬಿಡುಗಡೆ ಮಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್ ಹಾಗೂ ಕಚೇರಿ ಸಿಬ್ಬಂದಿ ಹಾಜರಿದ್ದರು.