Sunday, 11th May 2025

ಪಶ್ಚಿಮ ನೇಪಾಳ: ಭೂಕುಸಿತಕ್ಕೆ 1೩ ಜನರ ಸಾವು

ಠ್ಮಂಡು: ಪಶ್ಚಿಮ ನೇಪಾಳದಲ್ಲಿ ಭಾರೀ ಮಳೆಗೆ ಉಂಟಾದ ಭೂಕುಸಿತಕ್ಕೆ ಕನಿಷ್ಠ 1೩ ಜನರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಕರ್ತರು ರಕ್ಷಣಾ ಕಾರ್ಯ ನಡೆಸುತ್ತಿದ್ದು ಇನ್ನೂ 10 ಮಂದಿ ನಾಪತ್ತೆಯಾಗಿದ್ದು ಅವರ ಶೋಧ ಕಾರ್ಯ ನಡೆಸ ಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 450 ಕಿಮೀ ದೂರದಲ್ಲಿರುವ ಅಚಾಮ್ ಜಿಲ್ಲೆಯಲ್ಲಿ ಭೂಕುಸಿತದಿಂದ ಐದು ಮನೆಗಳು ಮಣ್ಣಿನಡಿಯಲ್ಲಿ ಹೂತುಹೋಗಿದೆ ಎಂದು ಪೊಲೀಸ್ ವಕ್ತಾರ ಡಾನ್ ಬಹದ್ದೂರ್ ಕರ್ಕಿ ಹೇಳಿದ್ದಾರೆ.

ಜೂನ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಈ ಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವುದರಿಂದ ಪರ್ವತ ಪ್ರದೇಶಗಳಲ್ಲಿ ಭೂಕುಸಿತ, ಪ್ರವಾಹಗಳು ಸಂಭವಿಸುತ್ತಿರುವುದು ಸಾಮಾನ್ಯ ಎನ್ನಲಾಗಿದೆ .

ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್ ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶ ಹೊರಡಿಸಿದ್ದಾರೆ.