Sunday, 11th May 2025

ಬಾಂಗ್ಲಾದೇಶದಲ್ಲಿ ಮೋಚಾ ಚಂಡಮಾರುತ ಭೀತಿ

ಢಾಕಾ: ಬಾಂಗ್ಲಾದೇಶದಲ್ಲಿ ತೀವ್ರ ಅಪಾಯಕಾರಿ ಮಟ್ಟದಲ್ಲಿ ಮೋಚಾ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಲಕ್ಷಾಂತರ ಜನರಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬಾಂಗ್ಲಾದೇಶ-ಮ್ಯಾನ್ಮಾರ್‌ ಭಾಗದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ವಿಶ್ವದ ಅತೀದೊಡ್ಡ ರೋಹಿಂಗ್ಯಾ ನಿರಾಶ್ರಿತ ಶಿಬಿರಿವಿರುವ ಪ್ರದೇಶಗಳಲ್ಲಿನ ಲಕ್ಷಾಂತರ ಮಂದಿಯ ಸ್ಥಳಾಂತರಕ್ಕೆ ಯೋಜನೆ ರೂಪಿಸಲಾಗಿದೆ ಎಂದು ವಿಪತ್ತು ನಿರ್ವಹಣ ತಂಡದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಂಟೆಗೆ 175 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, ತೀವ್ರತರದಲ್ಲಿ ಚಂಡಮಾರುತ ಅಪ್ಪಳಿಸ ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತದ ಅಂಡಮಾನ್‌ ನಿಕೋಬಾರ್‌, ಮಿಜೋರಾಂ, ತ್ರಿಪುರಾ, ನಾಗಾ ಲ್ಯಾಂಡ್‌, ಮಣಿಪುರ, ಅಸ್ಸಾಂ, ಒಡಿಶಾ ಹಾಗೂ ಪಶ್ಚಿಮ ಬಂಗಾಲದಲ್ಲೂ ತೀವ್ರ ಮಳೆಯಾಗುವ ಸಾಧ್ಯತೆಗಳಿದೆ ಎನ್ನಲಾಗಿದೆ.