Monday, 12th May 2025

ಕಂಟೈನರ್ ಡಿಪೋದಲ್ಲಿ ಬೆಂಕಿ ಅವಘಡ: 25 ಮಂದಿ ಸಾವು, 450ಕ್ಕೂ ಜನರಿಗೆ ಗಾಯ

ಢಾಕಾ: ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ, 25 ಮಂದಿ ಮೃತಪಟ್ಟು,  450ಕ್ಕೂ ಹೆಚ್ಚು ಜನರು ಗಾಯ ಗೊಂಡಿದ್ದಾರೆ.

ಚಿತ್ತಗಾಂಗ್‌ನಿಂದ 40 ಕಿಲೋಮೀಟರ್ ದೂರದಲ್ಲಿರುವ ದೇಶೀಯ ಕಂಟೇನರ್ ಸಂಗ್ರಹಣಾ ಘಟಕದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಯೂ ಲಘು ವಾಗಿ ಗಾಯ ಗೊಂಡಿದ್ದಾರೆಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸ ಲಾಗುತ್ತಿದೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದ್ದು, ಶೇ.60-90ರಷ್ಟು ಸುಟ್ಟ ಗಾಯಗಳಿಂದ ಬಳಲು ತ್ತಿದ್ದಾರೆ.

ಅಗ್ನಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಖಾಸಗಿ ಗೋದಾಮಿನಲ್ಲಿದ್ದ ಕೆಲವು ಕಂಟೈನರ್ ಗಳಲ್ಲಿ ಹೈಡ್ರೋಜನ್ ಪೆರಾಕ್ಸೈಡ್ ಸೇರಿದಂತೆ ರಾಸಾಯನಿಕಗಳಿದ್ದವು ಎನ್ನಲಾಗಿದೆ.