Thursday, 15th May 2025

ಫಿಲಿಡೆಲ್ಫಿಯಾ: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, 13 ಮಂದಿ ಸಾವು

ಫಿಲಿಡೆಲ್ಫಿಯಾ: ಅಮೆರಿಕಾದ ಫಿಲಿಡೆಲ್ಫಿಯಾದಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ, ಮಕ್ಕಳು ಸೇರಿ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗೆ ಸುಮಾರು 50 ನಿಮಿಷ ಬೇಕಾಯಿತು.

ಕಟ್ಟಡದಲ್ಲಿ ನಾಲ್ಕು ಸ್ಮೋಕ್ ಡಿಟೆಕ್ಟರ್‌ಗಳಿದ್ದರೂ, ವಿಫಲಗೊಂಡ ಕಾರಣ ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿ ಶಾಮಕ ದಳ ತಿಳಿಸಿದೆ. ಏಳು ಮಕ್ಕಳು ಸೇರಿದಂತೆ ಎಂಟು ಜನರು ಎರಡು ನಿರ್ಗಮನ ಮಾರ್ಗಗಳ ಮೂಲಕ ತಪ್ಪಿಸಿಕೊಳ್ಳಲು ಸಾಧ್ಯವಾಗಿದೆ.

ಕಟ್ಟಡವನ್ನು ಎರಡು ಕುಟುಂಬಗಳಿಗೆ ಅನುಕೂಲವಾಗುವಂತೆ ಪರಿವರ್ತಿಸಲಾಗಿದ್ದು, ಸುಮಾರು 26 ಮಂದಿ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಫೇರ್‌ ಮೌಂಟ್ ಪರಿಸರದಲ್ಲಿದ್ದ ಮೂರು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಅವಘಡ ನಡೆದಿದ್ದು, ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾ ಚರಣೆ ಕೈಗೊಂಡಿದ್ದರು.