Tuesday, 13th May 2025

ಪ್ರಮಾಣ ವಚನ ಸ್ವೀಕರಿಸಿದ ಪಾಕಿಸ್ತಾನದ ಸಚಿವ ಸಂಪುಟ

ಇಸ್ಲಾಮಾಬಾದ್‌: ಮಂಗಳವಾರ ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಝ್‌ ಷರೀಫ್‌ ಅವರ ಸಚಿವ ಸಂಪುಟದ 34 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

ಅಧ್ಯಕ್ಷ ಆರಿಫ್‌ ಅಲ್ವಿ ಅವರು ಗೈರಾದ ಕಾರಣ ಸೆನೆಟ್‌ನ ಅಧ್ಯಕ್ಷ ಸಾದಿಕ್‌ ಸಂಜರಾನಿ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಿಗದಿಯಾಗಿತ್ತು. ಆದರೆ ಅಧ್ಯಕ್ಷ ಅಲ್ವಿ ಅವರು ಪ್ರಮಾಣ ವಚನ ಬೋಧಿಸಲು ನಿರಾಕರಿಸಿದ್ದ ರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

ಪಾಕಿಸ್ತಾನ್‌ ಪೀಪಲ್ಸ್‌ ಪಾರ್ಟಿಯ(ಪಿಪಿಪಿ) ಅಧ್ಯಕ್ಷ ಬಿಲಾವಲ್‌ ಭುಟ್ಟೊ ಝರ್ದಾರಿ ಅವರು ವಿದೇಶಾಂಗ ಸಚಿವರಾಗಲಿದ್ದಾರೆ ಎಂದು ವರದಿಯಾಗಿದ್ದರೂ ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿಲ್ಲ.