Monday, 12th May 2025

ಟ್ರಂಪ್ ಪತ್ನಿ ಇವಾನಾ ಟ್ರಂಪ್ ನಿಧನ

ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ ಇವಾನಾ ಟ್ರಂಪ್ (73) ನಿಧನರಾಗಿದ್ದಾರೆ.

ನ್ಯೂಯಾರ್ಕ್ ನಗರದ ತಮ್ಮ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು, ಗುರುವಾರ ಇವಾನಾ ಟ್ರಂಪ್ ಅವರು ಕೊನೆಯುಸಿ ರೆಳೆದಿದ್ದಾರೆ. ಈ ಕುರಿತ ಮಾಹಿತಿಯನ್ನು ಡೊನಾಲ್ಡ್ ಟ್ರಂಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಕೆ ಅದ್ಭುತ, ಸುಂದರ ಮಹಿಳೆ. ಅವಳ ಮೂವರು ಮಕ್ಕಳಾದ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್. ಅವಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ ಇತ್ತು.

ಅವರು ತಮ್ಮ ಮಕ್ಕಳಿಗೆ ತಾಳ್ಮೆ ಮತ್ತು ಕಠಿಣತೆ, ಸಹಾನುಭೂತಿ ಮತ್ತು ನಿರ್ಣಯದ ಬಗ್ಗೆ ಕಲಿಸಿದ್ದಾರೆ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.