Monday, 12th May 2025

ಮುಖರ್ಜಿ ಅವರ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ

ಬೆಂಗಳೂರು:

ಮಾಜಿ ರಾಷ್ಟ್ರಪತಿ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

‘ಪ್ರಣಬ್ ಮುಖರ್ಜಿ ಅವರು ಭಾರತ ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಒಬ್ಬರು. ಅತ್ಯುತ್ತಮ ವ್ಯಕ್ತಿತ್ವ ಹೊಂದಿದ್ದ ಅವರು ಸುಮಾರು 5 ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಸೇವೆ ಸಲ್ಲಿಸಿದ ಮಹಾನ್ ನಾಯಕ.

ಯುಪಿಎ ಸರ್ಕಾರದಲ್ಲಿ ಪ್ರಮುಖ ಸಚಿವಾಲಯದ ಹುದ್ದೆ ಅಲಂಕರಿಸಿ, ನಂತರ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಚಿಂತನೆ, ಕೆಲಸ ಹಾಗೂ ಸೇವೆಯಿಂದ ದೇಶದ ಸರ್ವಶ್ರೇಷ್ಠ ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾದವರು.

ಗಾಂಧಿ ಅವರ ಚಿಂತನೆಯನ್ನು ಅಳವಡಿಸಿಕೊಂಡಿದ್ದ ಪ್ರಣಬ್ ಮುಖರ್ಜಿ ಅವರನ್ನು ‘Man for All Seasons’ ಎಂದೇ ಬಣ್ಣಿಸಲಾಗುತ್ತಿತ್ತು. ದೇಶದ ಇತಿಹಾಸ, ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಅಪಾರವಾದ ಜ್ಞಾನ ಹೊಂದಿದ್ದ ಮಹಾನ್ ನಾಯಕನನ್ನು ನಾವಿಂದು ಕಳೆದುಕೊಂಡಿದ್ದೇವೆ.

ಅವರ ಅಗಲಿಕೆಯ ನೋವನ್ನು ಅವರ ಕುಟುಂಬ ಸದಸ್ಯರು ಸೇರಿದಂತೆ ಅವರ ಅಪಾರ ಅಭಿಮಾನಿ ಬಳಗಕ್ಕೆ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *