Thursday, 15th May 2025

ಶೇ.1 ರಷ್ಟು ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ತಡೆಹಿಡಿಯಲು ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ: ಇದೇ ತಿಂಗಳ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ ಮತ್ತು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.

ಅಂದು ಹಲವು ಪರೀಕ್ಷೆಗಳಿದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ, ಪರೀಕ್ಷಾ ದಿನಾಂಕಗಳಿಗೆ ಸಂಬಂಧಿಸಿದಂತೆ ಎಲ್ಲರನ್ನೂ ತೃಪ್ತಿ ಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎ.ಎಂ. ಖಾನ್ ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಸಂಬಂಧಪಟ್ಟ ಪ್ರಾಧಿಕಾರದ ಮುಂದೆ ಈ ವಿಷಯ ಪ್ರಸ್ತಾಪಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದ್ದು, ಕಾನೂನಿನ ಪ್ರಕಾರ ಶೀಘ್ರದಲ್ಲಿಯೇ ಅದು ಬಗೆಹರಿಯಬಹುದೆಂದು ಹೇಳಿದೆ.

ಅರ್ಜಿದಾರರ ವಾದವು ಶೇಕಡಾ 99 ರಷ್ಟು ವಿದ್ಯಾರ್ಥಿಗಳಿಗೆ ಅನ್ವಯವಾಗಲ್ಲ, ಕೇವಲ ಶೇ.1 ರಷ್ಟು ವಿದ್ಯಾರ್ಥಿ ಗಳಿಗಾಗಿ ಪರೀಕ್ಷೆಯನ್ನು ತಡೆಹಿಡಿಯಲು ಸಾಧ್ಯ ವಿಲ್ಲ. ಪರೀಕ್ಷಾ ದಿನಾಂಕಗಳನ್ನು ಬದಲಾಯಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರ ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರ ಪರ ವಕೀಲರಿಗೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಸಿ.ಟಿ. ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಸೆಪ್ಟೆಂಬರ್ 12 ರಂದು ಇನ್ನಿತರ ಅನೇಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ನೀಟ್- ಯುಜಿ ಪರೀಕ್ಷೆಯನ್ನು ಮುಂದೂಡಬೇಕೆಂದು ಅಲಂ ವಾದಿಸಿದರು.

Leave a Reply

Your email address will not be published. Required fields are marked *