Monday, 12th May 2025

ದೇವೇಂದ್ರ ಫಡ್ನವೀಸ್ ಮುಂಬೈ ಪೊಲೀಸರ ವಶಕ್ಕೆ

ಮುಂಬೈ: ಮುಂಬೈ ಪೊಲೀಸರು ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಾರಾಷ್ಟ್ರ ಅಲ್ಪಸಂಖ್ಯಾತ ಖಾತೆ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ ಮುಂಬೈನ ಆಜಾದ್ ಮೈದಾನದಲ್ಲಿ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವ ರನ್ನು ವಶಕ್ಕೆ ಪಡೆದಿದ್ದಾರೆ.

ಸಚಿವ ನವಾಬ್ ಮಲಿಕ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಜತೆ ಆಸ್ತಿ ವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ಹಲವು ದಾಖಲೆಗಳನ್ನು ಬಿಡುಗಡೆ ಮಾಡಿದ್ದ ದೇವೇಂದ್ರ ಫಡ್ನವೀಸ್, ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದರು. ಅಲ್ಲದೇ, ಸಚಿವ ನವಾಬ್ ಮಲಿಕ್ ಅವರನ್ನು ಇಡಿ ಬಂಧಿಸಿತ್ತು.

ಜೈಲು ಪಾಲಾಗಿರುವ ಮಲಿಕ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.