Wednesday, 14th May 2025

ಕೆಸಿ ವೇಣುಗೋಪಾಲ್ ಗೆ ರಾಜಸ್ಥಾನ ’ಕೈ’ಬಿಕ್ಕಟ್ಟು ಶಮನ ಹೊಣೆ

ನವದೆಹಲಿ: ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಅಲ್ಲಿ ಕಾಂಗ್ರೆಸ್ ಬಣ ರಾಜಕೀಯ ಭುಗಿಲೆ ದ್ದಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಮುಂದಾ ಗಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ವಹಿಸಿದೆ.

ಭಾರತ್ ಜೋಡೋ ಯಾತ್ರೆ ಡಿಸೆಂಬರ್ ಮೊದಲ ವಾರದಲ್ಲಿ ರಾಜಸ್ಥಾನಕ್ಕೆ ಪ್ರವೇಶಿಸ ಲಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಬಂಡಾಯವನ್ನು ಶಮನಗೊಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ನಿಯೋಜಿಸುವ ಮೂಲಕ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

ವೇಣುಗೋಪಾಲ್ ಅವರು ನ.29 ರಂದು ರಾಜಸ್ಥಾನಕ್ಕೆ ಪ್ರಯಾಣಿಸಲಿದ್ದು, ರಾಜಸ್ಥಾನದ ಭಾರತ್ ಜೋಡೋ ಯಾತ್ರೆಗಾಗಿ ರಚಿಸಲಾದ ಸಮಿತಿಗಳ ಸದಸ್ಯರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಸಹ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ವೇಳೆ ವೇಣುಗೋಪಾಲ್ ಯಾತ್ರೆಯ ಸಿದ್ಧತೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸ ಲಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸುವ ಮುನ್ನವೇ ನಾಯಕತ್ವ ವಿಚಾರದಲ್ಲಿ ಮಧ್ಯಪ್ರವೇಶಿಸ ದಿದ್ದರೆ ತಡವಾಗುತ್ತದೆ ಎಂದು ಪಕ್ಷದ ನಾಯಕತ್ವ ಅರಿತುಕೊಂಡಿದೆ ಎಂದು ಮೂಲಗಳು ತಿಳಿಸಿವೆ.