Tuesday, 13th May 2025

ಅಂತರರಾಷ್ಟ್ರೀಯ ಯೋಗ ದಿನದಂದು ಲಸಿಕೆ ಮೇಳ ಯಶಸ್ವಿಗೊಳಿಸಿ: ಜೆ.ಪಿ. ನಡ್ಡಾ

ಬೆಂಗಳೂರು:  ಕೋವಿಡ್‌ನ್ನು ಸಮರ್ಪಕವಾಗಿ ನಿಭಾಯಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಈ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ಹಮ್ಮಿಕೊಂಡಿರುವ ಲಸಿಕೆ ಮೇಳವನ್ನು ಯಶಸ್ವಿಗೊಳಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲಹೆ ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಜೆ.ಪಿ ನಡ್ಡಾ ಅವರು ಭಾನುವಾರ ನಡೆಸಿದ ವಿಡಿಯೊ ಸಂವಾದ ದಲ್ಲಿ  ‘ಕಾವೇರಿ’ಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದರು.

‘ಯೋಗ ದಿನಾಚರಣೆ ಪ್ರಯುಕ್ತ ಲಸಿಕೆ ಮೇಳ ನಡೆಸಬೇಕು. ಅದನ್ನು ಯಶಸ್ವಿಗೊಳಿಸಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜೊತೆಗೆ ಕರೋನಾ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು’ ಎಂದು ಸಲಹೆ ನೀಡಿದ್ದಾರೆ.

ಬೂತ್ ಮಟ್ಟಕ್ಕೆ ಕಾರ್ಯಕ್ರಮಗಳು ತಲುಪಬೇಕು. ಲಸಿಕೆ ಎಲ್ಲರಿಗೂ ಸಿಗುವಂತೆ ಮಾಡಬೇಕು. ಪಕ್ಷ ಸಂಘಟನೆ ಚಟುವಟಿಕೆ ಯನ್ನೂ ಮರೆಯಬಾರದು’ ಎಂದೂ ಸಲಹೆ ನೀಡಿದ್ದಾರೆ.

‘ಮುಂದಿನ ಚುನಾವಣೆಗಳಲ್ಲಿ ಕೋವಿಡ್‌ ಪ್ರಮುಖ ಅಸ್ತ್ರವಾಗಲಿದೆ. ಅದರಲ್ಲಿ ಯಶಸ್ವಿಯಾದರೆ ಪಕ್ಷಕ್ಕೆ ಲಾಭ, ಸಂಘಟನೆಗೂ ಲಾಭ. ವಿಫಲವಾದರೆ ಪಕ್ಷದ ವಿರುದ್ಧ ವಿರೋಧ ಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಲಿದೆ

ಇದೇ 25ರಂದು ತುರ್ತುಪರಿಸ್ಥಿತಿ ನೆನಪಿಗಾಗಿ ಎಲ್ಲ ತಾಲ್ಲೂಕುಗಳಲ್ಲಿ ಕರಾಳ ದಿನಾಚರಣೆಗೆ ಪಕ್ಷ ನಿರ್ಧರಿಸಿದೆ. ಆ ದಿನ ವಿಡಿಯೊ ಸಂವಾದ ಮೂಲಕ ತುರ್ತು ಪರಿಸ್ಥಿತಿ ವೇಳೆ ಜೈಲಿನಲ್ಲಿದ್ದವರನ್ನು ಗುರುತಿಸುವ ಕೆಲಸ ಮಾಡಬೇಕು ಎಂದರು.

ಸೋಮವಾರ ನಡೆಯಲಿರುವ ಲಸಿಕೆ ಮೇಳಕ್ಕೆ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

Leave a Reply

Your email address will not be published. Required fields are marked *